ಪ್ರಗತಿವಾಹಿನಿ ಸುದ್ದಿ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾರಿ ಸಂಚಾರಕ್ಕೆ ನಿಷೇಧವಿದ್ದರೂ ರಾಜ್ಯ ಸರ್ಕಾರ ರಾತ್ರಿ ಸಂಚಾರಕ್ಕೆ ಅನುಮತಿ ನೀಡಲು ಸಿದ್ಧತೆ ನಡೆಸಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ವಯನಾಡ್ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹು ಗಾಂಧಿ ಬಂಡಿಪುರ ಮಾರ್ಗದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವುದಾಗಿ ಕಳೆದಬಾರಿ ಭರವಸೆ ಕೊಟ್ಟಿದ್ದರು. ಇದೀಗ ಈ ಬಗ್ಗೆ ಪ್ರಿಯಾಂಕಾ ಗಾಂಧಿ ಕೂಡ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್, ಬಂಡೀಪುರ ಅರಣ್ಯ ಮಾರ್ಗದಲ್ಲಿ ರಾತ್ರಿ ಸಂಚಾರ ಅನುಮತಿ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇದೀಗ ಈ ವಿಚಾರವ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದರು. ಡಿಸಿಎಂ ಡಿ.ಕೆ ಶಿವಕುಮಾರ್ ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಅವರನ್ನೇ ಕೇಳಿ. ನನಗೆ ತಿಳಿದ ಮಟ್ಟಿಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ