Karnataka News

*ವಾಲ್ಮೀಕಿ ನಿಗಮದ ಅವ್ಯವಹಾರ ಕೇಸ್: CBI ತನಿಖೆಗೆ ಹೈಕೋರ್ಟ್ ನಕಾರ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಿಸಿದೆ.

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ತಿಳಿಸಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ತನಿಖೆಗೆ ಸಿಬಿಐಗೆ ವಹಿಸಿದರೆ. ಇಂತದ್ದೇ ಬ್ಯಾಂಕ್ ಹಗರಣಗಳ ಬಗ್ಗೆ ಎಲ್ಲವನ್ನೂ ಸಿಬಿಐ ತನಿಖೆಗೆ ವಹಿಸಬೇಕು ಎಂಬ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೊರ್ಟ್ ಪೀಠ ತಿಳಿಸಿದೆ.

Home add -Advt


Related Articles

Back to top button