Politics

*50 ಜನ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

Home add -Advt

“ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದರು.

Related Articles

Back to top button