Karnataka News

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್*

ಪ್ರಗತಿವಾಹಿನಿ ಸುದ್ದಿ: ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್. ಥಣಿಸಂದ್ರದ ಬಳಿ ಇನ್ಸ್ ಪೆಕ್ಟರ್ ಸ್ನೇಹಿತ ನಂದೀಶ್ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಸಿಕ್ಕಿಬಿದ್ದಿದ್ದಾರೆ.

ಶ್ರೀದೇವಿ ಎಂಬ ಮಹಿಳೆಯ ಕೇಸ್ ಕ್ಲೋಸ್ ಮಾಡಲು ಇನ್ಸ್ ಪೆಕ್ಟರ್ ಅರುಣ್ ಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಾಡುಗೋಡಿ ನಿವಾಸಿ ಪರಮೇಶ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು 2 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button