ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಬ್ಬಂದಿ ಜೊತೆಗಿನ. ವಿವಾದದಿಂದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯ ಶಿವಪ್ರಿಯಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸುಮಾರು 80ಕ್ಕೂ ಹೆಚ್ಚು ಅಧೀನ ಸಿಬ್ಬಂದಿ ಶಿವಪ್ರಿಯಾ ವಿರುದ್ಧ ದೂರು ಸಲ್ಲಿಸಿದ್ದರು. ಆದರೆ ಆ ದೂರು ನಕಲಿ ಎಂದಿದ್ದರು ಶಿವಪ್ರಿಯಾ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಲಾಖೆ ಸಚಿವರು ಅಧಿಕಾರಿಯನ್ನು ವರ್ಗಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ