Kannada NewsKarnataka NewsLatest

*ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು *25,62,566* ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.

*ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ.* 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button