ಪ್ರಗತಿವಾಹಿನಿ ಸುದ್ದಿ: ಆಂಬುಲೆನ್ಸ್ ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ರೋಗಿಯನ್ನು ಹೊತ್ತೊಯ್ಯುತ್ತಿದ್ದ ಆಂಬುಲೆನ್ಸ್ ಸೈರನ್ ಜೊತೆಗೆ ಹಾರ್ನ್ ಮಾಡಿದರೂ ಕಾರು ಚಾಲಕ ದಾರಿ ಬಿಡದೇ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ರಸ್ತೆಯಲ್ಲಿ ತೆರಳುತ್ತಿದ್ದ ಬಹುತೇಕ ಎಲ್ಲಾ ವಾಹನಗಳು ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದಾರೆ. ಆದರೆ ಕಾರು ಚಾಲಕ ಮಾತ್ರ ದಾರಿ ಬಿಡದೇ ಉದ್ಧಟತನ ಮೆರೆದಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕೇರಳ ಪೊಲೀಸರು ಆಂಬುಲೆನ್ಸ್ ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ದಂಡ ವಿಧಿಸಿದ್ದಾರೆ. ಅಲ್ಲದೇ ಕಾರು ಚಾಲಕನ ಡ್ರೈವಿಂಗ್ ಲೈಸನ್ಸ್ ರದ್ದು ಮಾಡಿದ್ದಾರೆ.
ರಸ್ತೆ ಸುರಕ್ಷತಾ ನಿಮಗಳು ಹಾಗೂ ಕಾನೂನು ಪ್ರಕಾರ ಆಂಬುಲೆನ್ಸ್ ಗೆ ದಾರಿ ಮಾಡಿಕೊಡುವುದು ಪ್ರಮುಖವಾದ ಅಂಶ. ದಾರಿ ಬಿಡದಿರುವುದು ಶಿಕ್ಷಾರ್ಹ ಅಪರಾಧವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ