ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.
ವಕೀಲ ಕಣ್ಣನ್ (30) ಮಾರಣಂತಿಕವಾಗಿ ಗಾಯಗೊಂಡಿರುವವರು. ಹಾಡಹಗಲೇ ಹೊಸೂರು ಕೋರ್ತ್ ಆವರಣಿದಲ್ಲಿಯೇ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮಚ್ಚಿನಿಂದ ವಕೀಲನ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದು, ರಕ್ತದ ಮಡುವಿನಲ್ಲಿ ವಕೀಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಮೀನು ವಿವಾದಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹೊಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ