ಪ್ರಗತಿವಾಹಿನಿ ಸುದ್ದಿ: ಬಿಪಿಎಲ್ ಕಾರ್ಡ್ ಗೊಂದಲದ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಉಡುಪಿಯ ಕೊಲ್ಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ ಎಂದರು.
ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, “ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು ಇದರ ಬಗ್ಗೆ ಕೆಲಸ ಮಾಡುತ್ತಾರೆ. ನಾನು ನನಗೆ ಸಂಬಂಧ ಪಟ್ಟ ವಿಚಾರದಲ್ಲಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ