ಪ್ರಗತಿವಾಹಿನಿ ಸುದ್ದಿ: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ 9,105 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಸಂಡೂರಿನಲ್ಲಿ ಕೆಲ ಸುತ್ತಿನ ಮತ ಎಣಿಕೆ ಮಾತ್ರ ಬಾಕಿ ಇದ್ದು, ಅನ್ನಪೂರ್ಣ ತುಕರಾಂ ಗೆಲುವು ಖಚಿತ ಎನ್ನಲಾಗಿದೆ.
ಇನ್ನೊಂದೆಡೆ ಶಿಗ್ಗಾಂವಿಯಲ್ಲಿಯೂ ಬಿಜೆಪಿ ಅಭ್ಯರ್ಹಿ ಭರತ್ ಬೊಮ್ಮಾಹಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭಾರಿ ಮುನ್ನಡೆಯಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಿನ್ನಡೆ ಕಾಯ್ದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ