ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯತಿ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ಲಭಿಸಿದೆ. ಎನ್ ಡಿಎ ಈ ಬಾರಿ ನಿರೀಕ್ಷೆಗೂ ಮೀರಿ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದು, ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.
ಎನ್ ಡಿಎ-224, ಎಂವಿಎಂ -52 ಹಾಗೂ ಇತರೆ -12 ಕ್ಷೇತ್ರಗಳಲ್ಲಿ ಗೆಲುವು ಸಾಧಿವೆ. ಎನ್ ಡಿಎ ಅತಿ ಹೆಚ್ಚು ಮತಗಳನ್ನು ಪಡೆದುರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.
ನಾಳೆ ಮುಂಬೈನಲ್ಲಿ ಬಿಜೆಪಿ, ಶಿವಸೇನೆ ಹಾಗೂ ಎನ್ ಸಿಪಿ ಶಾಸಕರ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯುವ ಸಾಧ್ಯತೆ ಇದೆ. ನ.26ರಂದು ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಪದಗ್ರಹಣ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ