Latest

9 ಕಚೇರಿಗಳ ಸ್ಥಳಾಂತರ ನಿರ್ಧಾರ: ಹುಕ್ಕೇರಿ ಶ್ರೀಗಳ ಸ್ವಾಗತ

 

 

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಉತ್ತರ ಕರ್ನಾಟಕದ ಶಕ್ತಿ ಸೌಧಕ್ಕೆ ಪ್ರಮುಖ 9 ಸರಕಾರಿ ಕಚೇರಿಯನ್ನು ಸ್ಥಳಾಂತರ ಮಾಡುವ ಸಿಎಂ ಕುಮಾರಸ್ವಾಮಿ ಅವರ ಕಾರ್ಯ ಶ್ಲಾಘನೀಯ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಸಾಕಷ್ಟಿವೆ. ಅವುಗಳನ್ನು ಹೊತ್ತು ಬೆಂಗಳೂರಿನ ವಿಧಾನಸೌಧಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಭಾಗದ ವಿವಿಧ ಮಠಾಧೀಶರು ಹೋರಾಟ ನಡೆಸಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರ ಮೂಲಕ ಸರಕಾರಕ್ಕೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿಯೇ ಸಿಎಂ ಕುಮಾರಸ್ವಾಮಿ ಅವರು ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಸರಕಾರಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹತ್ತು ದಿನಗಳ ಕಾಲ ಸರಕಾರಕ್ಕೆ ಗಡುವು ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಕುಮಾರಸ್ವಾಮಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಹಾಗೂ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಜನತೆ ಹಾಗೂ ಈ ಭಾಗದ ಮಠಾಧೀಶರ ಪರವಾಗಿ ಶ್ರೀಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button