National

*ಮೊದಲ ಚುನಾವಣೆಯಲ್ಲಿಯೇ ಗೆದ್ದು ಬೀಗಿದ ಪ್ರಿಯಾಂಕಾ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮೊದಲ ಚುನಾವಣೆಯಲ್ಲಿಯೇ ಭಾರಿ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.

ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಸತ್ಯನ್ ಮೊಕೇರಿ 2,02261ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ 1,06,724 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Home add -Advt

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆದಿತ್ತು. ಮೊದಲ ಬಾರಿ ಚುನವಣಾ ಅಖಾಡಕ್ಕೆ ಇಳಿದಿದ್ದ ಪ್ರಿಯಾಂಕಾ ಗಾಂಧಿ ಇದೀಗ ವಯನಾಡ್ ನಲ್ಲಿ ಜಯಭೇರಿ ಬಾರಿಸಿದ್ದಾರೆ.

Related Articles

Back to top button