Karnataka NewsLatest
*ಗ್ಯಾರೇಜ್ ನಲ್ಲಿ ಬೆಂಕಿ: 18 ಬೈಕ್ ಹಾಗೂ 2 ಕಾರು ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ : ಮೈಸೂರು ಜಿಲ್ಲೆಯಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಜಿಲ್ಲೆಯ ಹೆಚ್. ಡಿ. ಕೋಟೆಯ ಪಡುವನಕೋಟೆ ಗ್ರಾಮದಲ್ಲಿನ ಗ್ಯಾರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾರೇಜ್ ನಲ್ಲಿದ್ದ 18 ದ್ವಿಚಕ್ರ ವಾಹನ ಹಾಗೂ 2 ಕಾರುಗಳು ಸುಟ್ಟು ಕರಕಲಾಗಿದೆ.
ಅಜಿತ್ ಎಂಬಾತನ ಗ್ಯಾರೇಜ್ ನಲ್ಲಿ ಬೆಂಕಿ ಕೆನ್ನಾಲಿಗೆಗೆ ನೋಡ ನೋಡ್ತಿದ್ದಂತೆ ಕಾರು ಹಾಗೂ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ. ಎಲ್ಲವೂ ಸುಟ್ಟು ಕರಕಲಾಗಿವೆ.
ಸುದ್ದಿ ತಿಳಿದು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್. ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.




