ಪ್ರಗತಿವಾಹಿನಿ ಸುದ್ದಿ : ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮಹಾ ವಿಕಾಸ ಆಘಾಡಿಗೆ ತೀವ್ರ ಹಿನ್ನಡೆ ಆದ ಪರಿಣಾಮ ಕೈ ನಾಯಕರು ಇವಿಎಂ ಹ್ಯಾಕ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.NCP ನಾಯಕಿ ಸುಪ್ರಿಯಾ ಸುಳೆ ಹೇಳಿರುವ ಮಾತಿನಂತೆ ನಾವೆಲ್ಲರೂ ಈ ವಿಚಾರವನ್ನ ಗಂಭೀರವಾಗಿ ತೆಗೆದುಕೊಳ್ಳುವ ಸಮಯ ಬಂದಿದೆ. ಕೆಲವೇ ದಿನಗಳಲ್ಲಿ ತಾವು ಕೂಡ ದಿಲ್ಲಿಗೆ ಹೋಗಲಿದ್ದು, ಈ ಬಗ್ಗೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸೋದಾಗಿ ಹೇಳಿದರು. ಇಡೀ ರಾಷ್ಟ್ರ ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು. ವಿಪಕ್ಷಗಳನ್ನ ಮಟ್ಟಹಾಕಲಾಗುತ್ತಿದೆ. ಇವಿಎಂ ಹ್ಯಾಕ್ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಹೇಳಿದರು.
ಕಾಂಗ್ರೆಸ್ ನಾಯಕ, ಗೃಹಮಂತ್ರಿ ಜಿ. ಪರಮೇಶ್ವರ್ ಕೂಡ ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರು, ಕಾಂಗ್ರೆಸ್ ಪಕ್ಷದೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಬಳಿಕ ಸಂಘಟಿತ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುಪ್ರಿಯಾ ಸುಳೆ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಡಿ.ಕೆ. ಶಿವಕುಮಾರ್, ಇವಿಎಂ ಹ್ಯಾಕ್ ಬಗ್ಗೆ ತನಿಖೆ ಅಗತ್ಯ ಎಂದು ನುಡಿದಿದ್ದಾರೆ. ದಿಲ್ಲಿಗೆ ತೆರಳಿ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ