ಪ್ರಗತಿವಾಹಿನಿ ಸುದ್ದಿ : ಮುಡಾ ಸೈಟು ಹಂಚಿಕೆಯಲ್ಲಿ ನಡೆದಿದೆಯೆನ್ನಲಾದ ಹಗರಣದ ವರದಿಯನ್ನು ಇಂದು ಲೋಕಾಯುಕ್ತ ಹೈಕೋರ್ಟ್‌ಗೆ ಸಲ್ಲಿಸಲಿದೆ.
400 ಕ್ಕೂ ಹೆಚ್ಚು ಪುಟಗಳಿರುವ ಈ ವರದಿಯನ್ನು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಸಿದ್ದಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಮತ್ತು ಬಾಮೈದರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದ ದೂರನ್ನಾಧರಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಲೋಕಾಯುಕ್ತ ತನಿಖೆ ನಡೆಸುವಂತೆ ಆದೇಶಿಸಿತ್ತು.
ಇದುವರೆಗೂ ಪ್ರಕರಣದಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳು,ಭೂಮಾಲಿಕರು, ಆಗಿನ ಅವಧಿಯಲ್ಲಿ ಮುಡಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದವರು, ಹಾಲಿ ಅಧ್ಯಕ್ಷರು ಅಧಿಕಾರಿಗಳನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ.
ಕೆಸರೆ ಗ್ರಾಮದ ಸರ್ವೆ ನಂಬರ್ 464 ರಲ್ಲಿ 14 ಸೈಟುಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ