ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ಉಂಟಾಗಿದ್ದು, ತಮಿಳುನಾಡು, ಪುದುಚೆರಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.
ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮ ಭಾರಿ ಮಳೆ, ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸುತ್ತಮುತ್ತ ಪ್ರದೇಶಗಳಲ್ಲಿ ದಟ್ಟ ಮೋಡಕವಿದ ವಾತಾವರಣವಿದ್ದು, ಮೈಕೊರೆವ ಚಳಿ ಜೊತೆಗೆ ಆಗಾಗ ಮಳೆಯಾಗುತ್ತಿದೆ.
ರಾಜ್ಯದ್ಯಂತ ತಾಪಾಮಾನ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ಆರಂಭವಾಗಿದ್ದು, ಸಂಜೆ ವೇಳೆಗೆ ಇನ್ನಷ್ಟು ಚಳಿ ಪ್ರಮಾಣ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ