ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು, ಯುವಕ-ಯುವತಿಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ಪ್ರಿಯಾಂಕಾ (19) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಎಂಇಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಓದುತ್ತಿದ್ದ ಪ್ರಿಯಂಕಾ, ಮನೆಯ ಟೆರೇಸ್ ಮೇಲೆ ನೇಣಿಗೆ ಕೊರಳೊಡ್ಡಿದ್ದಾಳೆ.
ಬೆಳಿಗ್ಗೆ ಮನೆಯವರು ಹೋಗಿ ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಪ್ರಿಯಾಂಕಾ ಕೆಲ ದಿನಗಳಿಇಂದ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ನ್ನೇಣಿಗೆ ಶರಣಗಾರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ