ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ನಾಲ್ವರನ್ನು ಬಲಿಪಡೆದಿದೆ. ತಮಿಳುನಾಡು, ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಚಂಡಮಾರುತದ ಪರಿಣಾಮ ನಾಳೆ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ನಾಳೆ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ