Belagavi NewsBelgaum NewsKarnataka News

*ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಉಪವಾಸ ಸತ್ಯಗ್ರಹ: ಕುರುಬೂರು ಶಾಂತಕುಮಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬೆಂಗಳೂರಿನಲ್ಲಿ ಡಿ. 6 ರಿಂದ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ತಿಳಿಸಿದರು.

ಇಂದು ನಗರದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 26ರಿಂದ ದೇಶದ ರೈತರ ಹಿತಕ್ಕಾಗಿ ಉಪವಾಸ ನಡೆಸುತ್ತಿರುವುದು 7 ದಿನಕ್ಕೆ ಕಾಲಿಟ್ಟಿದೆ ಪರಿಸ್ಥಿತಿ ಗಂಭೀರವಾಗಿದೆ. ದಲೈವಾಲರ ಉಪವಾಸ ಬೆಂಬಲಿಸಿ ಕರ್ನಾಟಕದ ರೈತ ಸಂಘಟನೆಗಳು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರ ಚಳುವಳಿ ನಿರತ ಮುಖಂಡರ ಜೊತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ರೈತರನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ಬರಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿಯಾಗಬೇಕು ಎಂದು ದೆಹಲಿ ಗಡಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ.  ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ದೇಶದ್ರೋಹಿಗಳು, ಕಳ್ಳ ಕಾಕರು ರೀತಿಯಲ್ಲಿ ಮಧ್ಯರಾತ್ರಿ ಬಂಧಿಸಿ ದೇಶದ ರೈತರಿಗೆ ಅಪಮಾನ ಮಾಡಿದ್ದಾರೆ. ನೂರಾರು ರೈತರು ಕನೋರಿ ಬಾರ್ಡರ್ನಲ್ಲಿ ಉಪವಾಸ ಕುಳಿತಿದ್ದಾರೆ. ಈ ಸತ್ಯಾಗ್ರಹ 7ನೇ ದಿನಕ್ಕೆ ಮುಂದುವರೆದಿದೆ. ಸರ್ಕಾರ ರೈತರ ಹಕ್ಕನ್ನು ದಮನ ಮಾಡಲು ಯತ್ನಿಸುತ್ತಿದೆ. ಸರ್ಕಾರದ ವರ್ತನೆಯನ್ನು ಖಂಡಿಸುತ್ತೇವೆ. ಕೂಡಲೇ ಕೇಂದ್ರ ಸರ್ಕಾರ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ರೈತ ಚಳುವಳಿಯ ಬಗ್ಗೆ ವರದಿ ನೀಡಲು ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಹಾಗು ಪರಿಣಿತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತು ಈ ಸಮಿತಿ ನವೆಂಬರ್ 22 ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಆರಂಭಿಕ ವರದಿಯನ್ನು ನೀಡಿದೆ. ರೈತರ ಆತ್ಮಹತ್ಯೆ ಆಗುತ್ತಿರುವುದು ಸರಿಯಾದ ಮಾರುಕಟ್ಟೆ ಇಲ್ಲದೆ ಇರುವುದು. ಉತ್ಪಾದನೆ ವೆಚ್ಚಕ್ಕೆ ಬೆಂಬಲ ಬೆಲೆ ಕಡಿಮೆ ಇರುವುದು ಗಂಭೀರವಾಗಿದೆ ಆದ್ದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಆದ್ದರಿಂದ ಎಂ ಎಸ್ ಪಿ ಖಾತ್ರಿ ಕಾನೂನು ಜಾರಿ ಮಾಡಲು ಕೇಂದ್ರಸರ್ಕಾರ ಕ್ರಮ ಕೈಗೊಳ್ಳಬೇಕೆಂದು ವರದಿ ನೀಡಿದೆ. ಈ ವರದಿ ನೀಡಿದ ಎರಡು ಮೂರು ದಿನದಲ್ಲಿ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ.  ಸಂವಿಧಾನ ದಿನ ಆಚರಣೆ ಮಾಡುವ ಸರ್ಕಾರಕ್ಕೆ ಹಕ್ಕುಗಳಿಗಾಗಿ ಹೋರಾಟ ಮಾಡುವ ರೈತ ಮುಖಂಡರನ್ನು ಬಂಧನ ಮಾಡಿ ಬಿಡುಗಡೆ ಮಾಡಿರುವುದು ಖಂಡನೀಯ. ಕೂಡಲೇ ಕೇಂದ್ರ ಸರ್ಕಾರ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಬಜೆಟ್ ನಲ್ಲಿ ರೈತರ ಸಾಲವನ್ನು 16% ಏರಿಕೆ ಮಾಡಿದ್ದೇವೆ ಎಂದು ಹಣಕಾಸು ಸಚಿವರು ನಿರ್ಮಲ ಸೀತಾರಾಮ್ ಬಜೆಟ್ ಘೋಷಣೆ ಮಾಡಿದರು. ಆದರೆ ಈಗ ನಬಾರ್ಡ್ ಮೂಲಕ ಸಹಕಾರ ಸಂಘಗಳಲ್ಲಿ ರೈತರಿಗೆ ಕೊಡುತ್ತಿದ್ದ ಬಡ್ಡಿ ರಹಿತ ಸಾಲ ಕಡಿವಾಣ ಹಾಕಲು ಶೇಕಡ 50ರಷ್ಟು ಅನುದಾನ ಕಡಿತ ಮಾಡಿದ್ದಾರೆ ಇದು  ರೈತರಿಗೆ ಸಹಕಾರ ಸಂಘಗಳಲ್ಲಿ ನೀಡುತ್ತಿದ್ದ ಬಡ್ಡಿ ರಹಿತ ಕೃಷಿ ಸಾಲ ತಪ್ಪಿಸುವ. ಹುನ್ನಾರವಾಗಿ ರಾಜ್ಯದ ರೈತರಿಗೆ ಮರ್ಮಗಾತವಾಗಿದೆ. ರಾಜ್ಯದ  ಸಂಸದರು ರೈತರ ಪರ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ಕಡಿತ ಮಾಡಿರುವ 50 ರಷ್ಟು ರಾಜ್ಯದ ಅನುದಾನವನ್ನು ಬಿಡುಗಡೆ ಮಾಡುವಂತೆ  ಒತ್ತಾಯಿಸಭೇಕು ಮತನೀಡಿದ ಕ್ಷೇತ್ರದ ಜನರಿಗೆ ತಿಳಿಯುವಂತಾಗಬೇಕು. ಡಿಸೆಂಬರ್ 23 ರಂದು ಮೈಸೂರಿನಲ್ಲಿ ರೈತರ ಹಬ್ಬ ವಿಶ್ವ ರೈತ ದಿನಾಚರಣೆಯ ರಾಜ್ಯಮಟ್ಟದ ರೈತ ಸಮಾವೇಶ ನಡೆಯಲಿದೆ ರೈತರು ಸ್ವಾಭಿಮಾನಿಗಳಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ ಎಂದು ಕರೆ ನೀಡಿದರು. 

ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿರುವುದರಿಂದ ಎಪ್ಆರ್‌ಪಿ ಮೇಲೆ ಹೆಚ್ಚುವರಿ ದರ ನಿಗದಿ ಮಾಡಬೇಕು  ಎಂದು ಕಬ್ಬು ಖರೀದಿ ನಿಯಂತ್ರಣ ಮಂಡಳಿ ಸಭೆಯಲ್ಲಿ ಒತ್ತಾಯಿಸಲಾಗಿದೆ ಒಂದು ವಾರದಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಕ್ಕರೆ ಸಚಿವರು ಶಿವಾನಂದ ಪಾಟೀಲ್ 29 ರಂದು ನಡೆದ ಮಂಡಳಿ ಸಭೆಯಲ್ಲಿ ತಿಳಿಸಿದ್ದಾರೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button