ಪ್ರಗತಿವಾಹಿನಿ ಸುದ್ದಿ: ಕಾರಿನ ಬ್ರೇಕ್ ಫೇಲ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ ಬಳಿ ನಡೆದಿದೆ.
ದಂಪತಿ ಹಾಗೂ ಮಗ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಕಾರಿನ ಬ್ರೇಕ್ ಫೇಲ್ ಆಗಿ ಈ ದುರಂತ ಸಂಭವಿಸಿದೆ. ರಾಕೇಶ್ ಹಾಗೂ ಮಗ ಮೋಕ್ಷಿತ್ (8) ಮೃತರು.
ರಾಕೇಶ್ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚನ್ನರಾಯಪಟ್ಟಣದ ಶ್ರವಣಿಗೇರಿ ಗ್ರಾಮಕ್ಕೆ ದಂಪತಿ ತಮ್ಮ ಮಗನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ