ಪ್ರಗತಿವಾಹಿನಿ ಸುದ್ದಿ: ಕೆಇಎ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲಿಸರು 10 ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಇಎ ಆಡಳಿತಾಧಿಕಾರಿ ಸಾಲುದ್ದೀನ್ ಗಾಡಿಯಲ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆಇಎ ನೌಕರ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ಸೀಟ್ ಬ್ಲಾಕ್ ಮಾಡುತ್ತಿದ್ದರು. ಅಭ್ಯರ್ಥಿಗಳು ಕಾಲೇಜು ಪ್ರವೇಶ ಪಡೆಯದ ಕಾರಣ ಮುಂದಿನ ಅರ್ಹ ಅಭ್ಯರ್ಥಿಗಳಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಸರ್ಕಾರಿ ಸೀಟುಗಳ ಬದಲಿಗೆ ಯಾನೇಜ್ ಮೆಟ್ ಕೋಟಾದ ಸೀಟುಗಳಾಗಿ ಪರಿವರ್ತಿಸಿ ಸರ್ಕಾರಿ ಕಾಲೇಜು ಅಭ್ಯರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಿ ವಂಚಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ 10 ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ