Karnataka News

*ಕೋರ್ಟ್ ಗೆ ಹಾಜರಾದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ*

ಪ್ರಗತಿವಾಹಿನಿ ಸುದ್ದಿ: ಎಂ ಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ, ವಿಚಾರಣೆಗೆ ಕೋರ್ಟ್ ಗೆ ಹಾಜರಾಗಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ವಿರುದ್ಧ ವಾರಂಟ್ ಜಾರಿ ಹಿನ್ನೆಯಲ್ಲಿ ಆರೋಪಿಗಳಾದ ಚೈತ್ರಾ, ಶ್ರೀಕಾಂತ್ ಸೇರಿ ಮೂವರು ಆರೋಪಿಗಳು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರಾದರು.

ಕನ್ನಡ ಬಿಗ್ ಬಾಸ್ ಸೀಜನ್-11ರ ಸ್ಪರ್ಧಿಯೂ ಆಗಿರುವ ಚೈತ್ರಾ, ಬಿಗ್ ಬಾಸ್ ಮನೆಯಿಂದ ನೇರವಾಗಿ ಕೊರ್ಟ್ ಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ.

ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದರಾಜು ಪೂಜಾರಿಗೆ ಚೈತ್ರಾ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚನೆ ಮಾಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೀಡಾಗಿದ್ದರು. ಬಳಿಕ ಜಾಮೀನಿನ ಮೇಲೆ ಚೈತ್ರಾ ಹಾಗೂ ಗ್ಯಾಂಗ್ ಬಿಡುಗಡೆಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button