Belagavi NewsBelgaum NewsKarnataka News

*ಡಿ.06 ರಂದು ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಡಿ.6 ರಂದು ಬೆಳಗ್ಗೆ 10 ರಿಂದ 2 ವರೆಗೆ ಜಿಲ್ಲೆಯ ನೆಹರು ನಗರದ ಎಸ್‌ಬಿ ಇನ್ಫೋಟೆಕ್.ಆರ್.ಕೆ ರೆನೈಸನ್ಸ್‌ ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

https://forms.gle/HeeyTZoirmk9abP56 ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ:8880652225 ಸಂಖ್ಯೆಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು. DEE.BGV ಇನ್‌ಸ್ಟ್ರಾಗ್ರಾಮ್ ಚಾನಲ್‌ನ್ನು ಪಾಲೋ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button