
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಅತಂತ್ರಗೊಳಿಸಲು ಬಿಜೆಪಿ ಕಾಂಗ್ರೆಸ್ ಸಚಿವರಿಗೆ ಆಫರ್ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ನನಗೂ ಆಫರ್ ನೀಡಿದ್ದರು ಎಂದು ಶಾಸಕ ಎಸ್‌ಎನ್ ಸುಬ್ಬಾರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ನನಗೆ ಸಚಿವ ಸ್ಥಾನಕ್ಕೆ ಆಫರ್ ನೀಡಿದ್ದರು ಕೂಡ ಅದನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದೇನೆ ಹಾಗಾಗಿ ನನಗೆ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸಚಿವ ಸ್ಥಾನ ಬೇಕು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕರಾಗಿರುವ ಅವರು, ಈಗಾಗಲೇ ಸಿಎಂ ಹಾಗೂ ಡಿಸಿಎಂ ಅವರು ನನಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ, ಅಲ್ಲದೇ ಇದಕ್ಕಾಗಿ ಎರಡು ಬಾರಿ ನಿಗಮ ಮಂಡಳಿ ಸ್ಥಾನ ತಿರಸ್ಕಾರ ಮಾಡಿದ್ದೇನೆ ಎಂದು ಸುಬ್ಬಾರೆಡ್ಡಿ ಹೇಳಿದರು.
ಇಲ್ಲಿಯ ವರೆಗೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಗೌರಿಬಿದನೂರು ವಿಧಾನಸಭಾ ಕ್ಷೇತ್ರ, ಚಿಂತಾಮಣಿ ಕ್ಷೇತ್ರದ ಶಾಸಕರು ಸಚಿವರಾಗಿದ್ದಾರೆ. ಬಾಗೇಪಲ್ಲಿ ಕ್ಷೇತ್ರದಿಂದ ಇದುವರೆಗೂ ಯಾರು ಕೂಡ ಸಚಿವರಾಗಿಲ್ಲ ಇದಕ್ಕಾದರು ನನಗೆ ಸಚಿವ ಸ್ಥಾನ ನೀಡಬೇಕು ಎಂದು ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ