Belagavi NewsBelgaum NewsPolitics

*ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ*

ಪ್ರಗತಿವಾಹಿನಿ ಸುದ್ದಿ: ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದೆ ವೇಳೆ ಡಿ.10ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ.

ಡಿ.9ರಿಂದ 20ರವರೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿ.10ರಂದು ಮಂಗಳವಾರ ಸಂಜೆ 6 ಗಂಟೆಗೆ ಬೆಳಗಾವಿಯ ಬೆಳಗುಂದಿ ಗ್ರಾಮದ ರಾಕಸಕೊಪ್ಪ ರಸ್ತೆಯಲ್ಲಿರುವ ಶೂನ್ಯ ಫಾರ್ಮ್ ರೀಟ್ರೀಟ್ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಧಿವೇಶನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಬಹುದಾದ ವಿಷಯಗಳು ಹಾಗೂ ಸರ್ಕಾರ ಹಾಗೂ ಸಚಿವರು ನೀಡಬೇಕಾದ ಸಮರ್ಪಕ ಉತ್ತರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಈ ಅಧಿವೇಶನ ಸರಕಾರದ ಪಾಲಿಗೆ ಮಹತ್ತವದ್ದಾಗಿದ್ದು, ಶಾಸಕರಿಗೆ, ಸಚಿವರಿಗೆ ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಹಲವು ನಿರ್ದೇಶನಗಳನ್ನು ನೀಡುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button