ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
25ಕ್ಕು ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ಬಿಮ್ಸ್ ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ