ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಡಿಸೆಂಬರ್ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಮೊದಲ ವಾಯುಭಾರ ಕುಸಿತದಿಂದ ಒಂದೆರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಡಿ.14 ಹಾಗೂ 15 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಎರಡನೇ ವಾಯುಭಾರ ಕುಸಿತದಿಂದ ಡಿ.16 ರಿಂದ ಡಿ.18 ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ. ಇನ್ನು ಮಲೆನಾಡು ಭಾಗದಲ್ಲಿ ದಿನಾ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ