Belagavi NewsBelgaum NewsPolitics

*ಬಳ್ಳಾರಿ ಮಾದರಿಯಲ್ಲಿ ಬೆಳಗಾವಿಯಲ್ಲಿಯೂ ತನಿಖೆಯಾಗಲಿ: ಯತ್ನಾಳ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶಿಗಳ ಸಾವು ಪ್ರಕರಣ ರಾಜ್ಯಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳಲ್ಲಿ ಬೆಳಗಾವಿಯಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಸಾವನ್ನಪ್ಪಿದ್ದಾರೆ. ಅಪೌಷ್ಠಿಕತೆಯಿಂದಲೇ ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣ ವಿಪಕ್ಷ ಬಿಜೆಪಿ ನಾಯಕರಿಗೆ ಅಧಿಇವೇಶನದ ಸಂದರ್ಭದಲ್ಲಿ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್, ಪೌಷ್ಠಿಕ ಆಹಾರದ ಸಮಸ್ಯೆಯಿಂದಾಗಿ ಬೆಳಗಾವಿಯಲ್ಲಿಇ ನವಜಾತ ಶಿಶುಗಳು ಸಾವನ್ನಪ್ಪುದ್ದಿದ್ದಾರೆ. ಬಾಣಂತಿಯರ ಸಾವು ಸಂಭವಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಜಿಲ್ಲೆಯಲ್ಲಿಯೇ ಈ ಘಟನೆ ನಡೆದಿರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಡಿಹೆಚ್ ಒ ಹೇಳುವ ಪ್ರಕಾರ ಅಪೌಷ್ಠಿಕತೆಯಿಂದಾಗಿ ಶಿಶುಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಭಿಮ್ಸ್ ನಲ್ಲಿಯೇ ನೂರಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಪೌಷ್ಠಿಕ ಆಹಾರ ಸಮಸ್ಯೆಯಿಂದಾಗಿ ಈ ಘಟನೆಗಳು ಸಂಭವಿಸುತ್ತಿವೆ. ನಮ್ಮ ಸರ್ಕಾರವೂ ಬ್ಲ್ಯಾಕ್ ಲಿಸ್ಟ್ ನ ಕಂಪನಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಚೆನ್ನೈನಲ್ಲಿರುವ ಕಂಪನಿಗೆ ಪೌಷ್ಠಿಕ ಆಹಾರದ ಟೆಂಡರ್ ಕೊಟ್ಟಿದ್ದಾರೆ. ಪೌಷ್ಠಿಕ ಆಹಾರ ಪೂರೈಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಈ ಹಿಂದೆ ಬಿಜೆಪಿ ಸರ್ಕಾರವೂ ಇದೇ ಕಂಪನಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಸಿಎಂ ಗಳೇ ಡೀಲ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಬಾಣಂತಿಯರ ಸಾವು, ಶಿಶುಗಳ ಸಾವು ಪ್ರಕರಣದ ಬಗ್ಗೆ ಬಳ್ಳಾರಿ ಮಾದರಯಲ್ಲಿ ಇಲ್ಲಿಯೂ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button