ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದು, ಈ ವೇಳೆ ಯತ್ನಾಳ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿದರು.
ವಕ್ಫ್ ವಿಚಾರವಾಗಿ ಪ್ರತ್ಯೇಕ ಹೋರಾಟ ಹಾಗೂ ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಾಯಿಗೆ ಬಂದ ಹೇಳಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು.
ಈ ವೇಳೆ ಯತ್ನಾಳ್ ನಡೆಯ ಬಗ್ಗೆ ಚರ್ಚೆ ನಡೆಸಲಾಗಿತ್ತು, ಜೊತೆಗೆ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಜಯೇಂದ್ರ ಹಾಗೂ ಡಿ.ವಿ ಸದಾನಂದ ಗೌಡ ಕೋರ್ ಕಮಿಟಿಗೆ ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ವಿಚಾರಣೆ ನಡೆಸಿದ ಅಗರ್ವಾಲ್ ಯತ್ನಾಳ್ ವಿರುದ್ಧ ಏನೇ ಆದರೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಯತ್ನಾಳ್ ವಿರುದ್ಧ ಸೂಕ್ತ ಸಂದರ್ಭದಲ್ಲಿ ಸೂಕ್ತ ವಿಚಾರವನ್ನು ತೆಗೆದುಕೊಳ್ಳಲಾಗುವುದು, ಕ್ರಮದ ಬಗ್ಗೆ ಒತ್ತಡ ಬಂದರು ಕೂಡ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ, ಜೊತೆಗೆ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಸಾಧ್ಯವಿಲ್ಲ, ಒಂದು ವೇಳೆ ಹಾಗೆ ಮಾಡಿದರೆ ಪಕ್ಷಕ್ಕೆ ನಷ್ಟ ಎಂದು ಹೇಳಿದರು.
ಈ ಸಮಸ್ಯೆಯನ್ನು ಕೇಂದ್ರ ಸಚಿವ ಅಮಿತ್ ಷಾ ಮೂಲಕ ಬಗೆಹರಿಸಲು ಮನವಿ ಮಾಡುತ್ತೇನೆ, ರಾಷ್ಟ್ರೀಯ ಅಧ್ಯಕ್ಷರ ನೇಮಕದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಯತ್ನಾಳ್ ಬಗ್ಗೆ ವರಿಷ್ಠರಿಗೆ ಬಿಡಿ, ಅವರ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ ಎಲ್ಲಾ ವರಿಷ್ಠರ ಗಮನದಲ್ಲಿದೆ ಎಂದು ಅಗರ್ವಾಲ್ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ