
ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನವಡಿಯಲ್ಲಿ ನಡೆದಿದೆ.
ಘಟನೆಯಿಂದ ತಾಯಿ ಹಾಗು ಮೂವರು ಮಕ್ಕಳು ಮಲಗಿದ್ದ ಮಂಚ ಬೆಂಕಿಗಾಹುತಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಗೋಡೆಗಳಿಗೆ ಹಾನಿಯಾಗಿವೆ. ಗ್ಯಾಸ್ ಪೈಪ್ ಲೈನ್ ನಲ್ಲಿ ದೋಷ ಅಥವಾ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
					
				
					
					
					
					
					
					
					

