Belagavi NewsBelgaum News

*ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಅಜೀತ್‌ ಪಾಟೀಲ (27) ಎಂಬ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಸಂತೋಷ್ ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಕೆ.ಎಸ್ ಹಟ್ಟಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

Home add -Advt

ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾದೀಶೆ ಸಿ.ಎಮ್ ಪುಷ್ಪಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡವಿಧಿಸಿದ್ದಾರೆ. ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಎಲ್. ವಿ ಪಾಟೀಲ್‌ ವಾದ ಮಂಡಿಸಿದ್ದರು.

Related Articles

Back to top button