Belagavi NewsBelgaum NewsPolitics

*ಬೆಳಗಾವಿಯಲ್ಲೊಂದು ವಿನೂತನ ಕಾರ್ಯಕ್ರಮ: ಸಾವಿರ ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ*

ಸಿದ್ದರಾಮಯ್ಯ ಕನಸು ಸಾಕಾರ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ಭಾನುವಾರ ನಡೆಯಿತು.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ ವಿವಿಧ ಸೌಲಭ್ಯಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರಿ ವಿತರಿಸಿದರು.

ಸರಕಾರಿ ಸೌಲಭ್ಯಗಳು ಮನೆಬಾಗಿಲಿಗೆ ತಲುಪಬೇಕು. ಗ್ರಾಮೀಣ ಕ್ಷೇತ್ರದ ಜನರು ಮುಗ್ದರಿದ್ದು ಬಹಳಷ್ಟು ಜನರಿಗೆ ಸೌಲಭ್ಯ ಪಡೆಯುವುದು ಹೇಗೆಂದು ಗೊತ್ತಿಲ್ಲ. ಮಧ್ಯವರ್ತಿಗಳಿಗೆ ಹಣ ಕೊಟ್ಟು ಮೋಸ ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವುದು ನನ್ನ ಮುಖ್ಯ ಉದ್ದೇಶ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗ್ರಾಮೀಣ ಪ್ರದೇಶದ ಜನರು, ರೈತರು ಬಹಳ ಮುಗ್ದರಿರುತ್ತಾರೆ. ಇದನ್ನೇ ಬಂಡವಾಳವಾಗಿಸಿಕೊಂಡು ಮಧ್ಯವರ್ತಿಗಳು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಮಧ್ಯವರ್ತಿಗಳ ಕಾಟ ತಪ್ಪಿಸುವ ಸಲುವಾಗಿಯೇ ಇಂಥ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.

ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ 19 ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಿಸಲಾಗುತ್ತಿದೆ. ಪ್ರತಿ ವಾರ 10-15 ಜನರಿಗೆ ಸಿಎಂ ಪರಿಹಾರ ನಿಧಿ ವಿತರಿಸಲಾಗುತ್ತಿದೆ. ಸುಳೇಭಾವಿಯಲ್ಲಿ ವಿದ್ಯುತ್ ಅವಘಡದಿಂದ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಇದೀಗ ತಲಾ 5 ಲಕ್ಷ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿಲಾಗಿದೆ. ಜೊತೆಗೆ ಮಕ್ಕಳ ವಿದ್ಯಾಭ್ಯಾಸ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೇನೆ. ಅವರಿಗೆ ನಾನೇ ತಾಯಿಯಾಗಿ ನಿಲ್ಲುತ್ತೇನೆ ಎಂದು ಸಚಿವರು ಹೇಳಿದರು.

166 ಬಡ ಕುಟುಂಬಗಳಿಗೆ ರೇಷನ್ ಕಾರ್ಡ್ ಮಾಡಿಸಿಕೊಡಲಾಗಿದೆ. ಪಶುಸಂಗೋಪನಾ ಇಲಾಖೆ, ಕಾರ್ಮಿಕ ಇಲಾಖೆ, ಇಂಧನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ವಿರೋಧ ಪಕ್ಷದವರೂ ಏನು ಬೇಕಾದರೂ ಮಾತಾಡಲಿ, ನಾನು ಯಾವುದೇ ಜಾತಿ, ಧರ್ಮ, ಪಕ್ಷ ನೋಡದೆ, ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಇಡೀ ಕರ್ನಾಟಕಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ತಿಳಿಸಿದರು.


ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಪ್ರತಿ ವರ್ಷ ನನ್ನ ಕ್ಷೇತ್ರದಿಂದ 50 ಸಾವಿರ ಜನರು ಭೇಟಿ ಕೊಡುತ್ತಿದ್ದಾರೆ. ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಕ್ಷೇತ್ರದ ಪ್ರವಾಸಿಗರ ಅನುಕೂಲಕ್ಕಾಗಿ ತಂಗುದಾಣವನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಏಕಕಾಲಕ್ಕೆ 2 ಸಾವಿರ ಜನರು ಉಲಿದುಕೊಳ್ಳಲು ವ್ಯವಸ್ಥಾ ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button