ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ಅ ವರು ಭಾನುವಾರ ವೀಕ್ಷಿಸಿದರು.
ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ ಪಾಠ ಹೇಳುವ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಸಭಾ ಕಾರ್ಯದರ್ಶಿಗಳಾದ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ