ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ನಗರಿ ಮುಂಬೈ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ವೊಂದು ಅಡ್ಡಾದಿಡ್ಡಿಯಾಗಿ ವೇಗವಾಗಿ ಚಲಿಸಿ ಆಟೋ ರಿಕ್ಷಾ ಹಾಗೂ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 4 ಮಂದಿ ಮೃತಪಟ್ಟಿದ್ದು, 29 ಮಂದಿ ಗಾಯಗೊಂಡಿದ್ದಾರೆ.
ಮುಂಬೈನ ಕುರ್ಲಾ ಪ್ರದೇಶದ ಎಸ್ ಜಿ ಬರ್ವೆ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಸ್ಟ್ ಬಸ್ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಈ ಸಂಬಂಧ ಬಸ್ ನ ಡ್ರೈವರ್ ಸಂಜಯ್ ಮೊರೆ ಎಂಬಾತನನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸೋಮವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆನಿಖರವಾದ ಕಾರಣ ಏನೆಂಬುದನ್ನು ತನಿಖೆ ಮಾಡುತ್ತಿದ್ದಾರೆ. ಪ್ರಾಥಮಿಕ ಹಂತದ ತನಿಖೆ ವೇಳೆ ಬ್ರೇಕ್ ಫೇಲ್ ಆಗಿರೋ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ