Karnataka NewsLatest

*ಎಸ್.ಎಂ.ಕೃಷ್ಣ ವಿಧಿವಶ: 3 ದಿನ ಶೋಕಾಚರಣೆ, ನಾಳೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಾಟ ನಡೆಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸರ್ಕಾರಿ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ. ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ.

ಬುಧವಾರ ಸರಕಾರಿ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button