ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾಳೆ ಬೆಳಿಗ್ಗೆ 8ಗಂಟೆಯವರೆಗೆ ಎಸ್.ಎಂ.ಕೃಷ್ಣ ಅವರ ಸದಾಶಿವ ನಗರ ನಿವಾಸದಲ್ಲಿಯೇ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.
ಬಳಿಕ ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮನಳ್ಳಿ ಕಾಫಿಡೇ ಆವರಣದಲ್ಲಿ ಎಸ್.ಎಂ.ಕೃಷ್ಣ ಆಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ