ಪ್ರಗತಿವಾಹಿನಿ ಸುದ್ದಿ : ರಾಜಕೀಯ ಮುತ್ಸದ್ದಿ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ ಇಡೀ ಕರುನಾಡಿಗೆ ಬರಸಿಡಿಲು ಬಡಿದಂತಾಗಿದೆ. ತನ್ನ ಗುರುವನ್ನ ಕಳೆದುಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ದಿಗ್ಭ್ರಾಂತರಾಗಿದ್ದಾರೆ.
ವಿಷಯ ತಿಳಿದು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ಎಸ್ ಎಂ ಕೃಷ್ಣ ಅವರನ್ನ ನೆನೆದು ಕಣ್ಣೀರಿಟ್ಟಿದ್ದಾರೆ. ಸದಾವಶಿವನಗರದ ಎಸ್. ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್ ಮೃತದೇಹದ ಮುಂದೆ ನಿಂತು ಕಣ್ಣೀರಿಟ್ಟಿದ್ದಾರೆ.
ಎಸ್ ಎಂ ಕೃಷ್ಣ ಅಪರೂಪದ ರಾಜಕಾರಣಿ. ಶಿಸ್ತು ಸಂಯಮಕ್ಕೆ ಹೆಸರುವಾಸಿಯಾಗಿದ್ದರು. ಅವರು ನನ್ನ ರಾಜಕೀಯ ಗುರುಗಳು. ಅವರ ನಿಧನದಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಡಿಕೆಶಿ ಭಾವುಕರಾಗಿದ್ದಾರೆ.
ಖುದ್ದು ಡಿಕೆಶಿ ಮುಂದೆ ನಿಂತು ಶವ ಸಂಸ್ಕಾರಕ್ಕೆ ಬೇಕಾಗಿರುವ ಎಲ್ಲಾ ಸಿದ್ಧತೆಗಳನ್ನ ನೋಡಿಕೊಳ್ತಿದ್ದಾರೆ. ಎಸ್ ಎಂ ಕೃಷ್ಣ ಮಗಳ ಮಗನಿಗೆ ಡಿಕೆಶಿ ಪುತ್ರಿ ಐಶ್ವರ್ಯ ಳನ್ನ ಕೊಟ್ಟು ಮದುವೆ ಮಾಡಿಕೊಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ