Belagavi NewsBelgaum NewsPolitics
*ಪಂಚಮಸಾಲಿ ಪ್ರತಿಭಟನೆ ವೇಳೆ ಬಿ.ವೈ.ವಿಜಯೇಂದ್ರಗೆ ಅವಮಾನ; ಭಾಷಣ ಅರ್ಧಕ್ಕೆ ನಿಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ*
ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಅವಮಾನ ಮಡಲಾಗಿದ್ದು, ಪ್ರತಿಭಟನಾಕಾರರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು, ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪಂಚಮಸಾಲಿ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಿದ್ದ ವಿಜಯೇಂದ್ರ ಅವರ ಭಾಷಣದ ವೇಳೆ ಕೆಲವರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ. ಇದರಿಂದ ಇರಿಸುಮುರಿಸುಗೊಂಡ ವಿಜಯೇಂದ್ರ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ