ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತಿಮ ಯಾತ್ರೆ ಆರಂಭವಾಗಿದೆ. 92 ವರ್ಷದ ಎಸ್.ಎಂ.ಕೃಷ್ಣ ನಿನ್ನೆ ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದರು. ಇಂದು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿಉವನಗರದ ಅವರ ನಿವಾಸದಿಂದ ಎಸ್.ಎಂ.ಕೃಷ್ಣ ಪಾರ್ಥಿವ ಶರೀರವನ್ನು ವಾಹನದ ಮೂಲಕ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಈಗಾಗಲೇ ಅಂತಿಮ ಯಾತ್ರೆ ಸಾಗಿದ್ದು, ಬೆಂಗಳೂರಿನಿಂದ ಮದ್ದೂರಿನವರೆಗೂ ರಸ್ತೆಗಳ ಇಕ್ಕೆಲಗಳಲ್ಲಿ ಜನಸಾಗರವೇ ನೆರೆದಿದೆ.
ಮ್ಪಾರ್ಥಿವಶರೀರವಿರುವ ವಾಹನದ ಮೇಲೆ ಎಸ್.ಎಂ.ಕೃಷ್ಣ ಅಭಿಮಾನಿಗಳು, ಸಾರ್ವಜನಿಕರು, ರಾಜಕೀಯ ನಾಯಕರು ಪುಷ್ಪಮಳೆಗರೆದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಸದ್ಯ ಪಾರ್ಥಿವ ಶರೀರ ಬಿಡದಿ ತಲುಪಿದ್ದು, ಫ್ಲೈಓವರ್ ಮೇಲೆ ನಿಂತಿರುವ ಜನಸಾಗರ ಪುಷ್ಪನಮನ ಸಲ್ಲಿಸಿದೆ.
ಮದ್ದೂರಿನ ಸೋಮನಹಳ್ಳಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ಬಳಿಕ ಸಂಜೆ ಸೋಮನಹಳ್ಳಿಯ ಕಾಫಿಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ