Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಅಬ್ಬರ ತಗ್ಗುತ್ತಿದ್ದಂತೆ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು,ಚಾಮರಾಜನಗರ, ಕೋಲಾರ, ಕೊಡಗು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button