
ಪ್ರಗತಿವಾಹಿನಿ ಸುದ್ದಿ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ.
ಕುಸುಮಾ (35) ಎಂಬ ಮಹಿಳೆ ತನ್ನ 6 ವರ್ಷದ ಮಗ ಹಾಗೂ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳ ಹಿಂದಷೇ ಕುಸುಮಾ ಹಾಗೂ ಆಕೆಯ ಪತಿ ನಡುವೆ ಜಗಳವಾಗಿತ್ತು. ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.