Latest

ಮಹಾರಾಷ್ಟ್ರ, ಹರಿಯಾಣ ಎರಡೂ ಕಡೆ ಬಹುಮತದತ್ತ ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಮಹಾರಾಷ್ಟ್ರ ಮತ್ತು ಹರಿಯಾಣ ಎರಡೂ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ ಮುನ್ನಡೆದಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರಳ ಬಹುಮತ ಸಾಧಿಸಿದೆ. ಕಾಂಗ್ರೆಸ್ ಈವರೆಗೆ ಕೇವಲ 77 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಹರಿಯಾಣದ 90 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 32 ಹಾಗೂ ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪೈಪೋಟಿ ನೀಡುತ್ತಿದ್ದರೂ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ.

ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಷ್ಟ್ರಾದ್ಯಂತ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ  ಹಿನ್ನಡೆ ಅನುಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button