ಪ್ರಗತಿವಾಹಿನಿ ಸುದ್ದಿ: ಮದುವೆಯಾಗಿ ಮೂರುತಿಂಗಳಲ್ಲೇ ಮಹಿಳೆಯೊಬ್ಬರು ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ರಮ್ಯಶ್ರೀ ಹಂಪನ್ನವರ್ ಮೃತ ಮಹಿಳೆ. ರಮ್ಯಶ್ರೀ ಬಸವರಾಜ್ ಎಂಬುವವರ ಜೊತೆ ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು. ಇದು ರಮ್ಯಶ್ರೀಗೆ ಎರಡನೇ ಮದುವೆ ಎನ್ನಲಾಗಿದೆ.
ನಾಲ್ಕು ವರ್ಷಗಳ ಹಿಂದೆ ಮೊದಲ ಪತಿಯಿಂದ ದೂರವಾಗಿದ್ದ ರಮ್ಯಶ್ರೀ ಮೂರು ತಿಂಗಳ ಹಿಂದೆ ಎರಡನೇ ವಿವಾಹವಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾರೆ.
ಪತಿ ನೇಣಿಗೆ ಶರಣಾದದ್ದನ್ನು ನೋಡಿದ ಪತಿ ಬಸವರಾಜ್ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ್ದ. ತೀವ್ರ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಬಾಗ ಠಾಣೆ ಪೊಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ