ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅತುಲ್ ಪತ್ನಿ, ಅತ್ತೆ ಹಗೂ ಭಾಮೈದನನ್ನು ಬಂಧಿಸಿದ್ದಾರೆ.
ಪತ್ನಿ ನಿಖಿತಾ, ಅತ್ತೆ ನಿಶಾ ಹಾಗೂ ಭಾಮೈದ ಅನುರಾಗ್ ಬಂಧಿತರು. ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಪತಿ ಹಾಗೂ ಪತ್ನಿ ನಡುವೆ ಜಗಳ ಕೋರ್ಟ್ ಮೆಟ್ಟಿಲೇರಿತ್ತು. ಡಿ.9ರಂದು ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು, ಕೆಲ ವಿಚಾರಗಳ ಬಗ್ಗೆ ರೆಕಾರ್ಡ್ ಮಾಡಿಟ್ಟು ಬೆಂಗಳೂರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಇದೀಗ ಪತ್ನಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಿದ್ದು, ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ತಾಯಿ ನಿಶಾ ಹಾಗೂ ಅನುರಾಗ್ ನನ್ನು ಬಂಧಿಸಲಾಗಿದೆ.
ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ