Kannada NewsKarnataka NewsLatest

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಂಕರಗೌಡ ಪಾಟೀಲ

ಪ್ರಗತಿವಾಹಿನಿ ಸುದ್ದಿ, ನವದೆಹಲಿ  -ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ನವದೆಹಲಿಯಲ್ಲಿ ಗುರುವಾರ ಕೇಂದ್ರದ ಹಿರಿಯ ಸಚಿವರನ್ನು ಭೇಟಿ ಮಾಡಿದ್ದರು.

ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕರ್ನಾಟಕ ಬಿಜೆಪಿ ಸರಕಾರದ ಸಾಧನೆಗಳನ್ನು ವಿವರಿಸಿದ ಶಂಕರಗೌಡ ಪಾಟೀಲ, ರಾಜ್ಯದ ಅಭಿವೃದ್ಧಿ ಸಂಬಂಧ ಸಲಹೆಗಳನ್ನು ಪಡೆದರು.

Home add -Advt

ಕರ್ನಾಟಕದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ. ಉತ್ತಮ ರೀತಿಯಲ್ಲಿ ಕೆಲಸ ಮುಂದುವರಿಸಿ ಎಂದು ಇಬ್ಬರು ಸಚಿವರೂ ಮಾರ್ಗದರ್ಶನ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಶಂಕರಗೌಡ ಪಾಟೀಲ ಕೇಂದ್ರದ ಹಿರಿಯ ಸಚಿವರನ್ನು ಭೇಟಿ ಮಾಡಿದರು.

Related Articles

Back to top button