ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬAಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ