ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿ, ವಿದ್ಯಾ ದೇವತೆ ಸರಸ್ವತಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಅರಳಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಸೈಕಲ್ ಗಳನ್ನು ವಿತರಿಸಿ, ಮಕ್ಕಳ ವಿದ್ಯಾಭ್ಯಾಸದ ಕುರಿತು ಹೆಬ್ಬಾಳಕರ್ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ, ಶಿಕ್ಷಣ ವ್ಯವಸ್ಥೆ ಉತ್ತಮವಾಗಿದ್ದರೆ ಹೆಣ್ಣು ಮಕ್ಕಳೂ ಸೇರಿದಂತೆ ಯಾರೂ ಶಿಕ್ಷಣದಿಂದ ವಂಚಿತರಾಗುವುದಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಆದ್ಯತೆ ನೀಡಲಾಗುತ್ತಿದೆ. ಶಾಲಾ ಕಟ್ಟಡ, ಕಂಪೌಂಡ್ ವಾಲ್, ಆಟದ ಮೈದಾನ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಒದಗಿಸಲಾಗುತ್ತಿದೆ ಎಂದರು.
ಪ್ರತಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಅತೀ ಹೆಚ್ಚಿನ ಪ್ರಮಾಣದಲ್ಲಿ ಕ್ಷೇತ್ರಕ್ಕೆ ಅನುದಾನ ತರುತ್ತಿದ್ದೇನೆ. ಎಲ್ಲರ ಆಶಿರ್ವಾದ ಇದ್ದರೆ ಕ್ಷೇತ್ರವನ್ನು ಮಾದರಿ ಮಾಡಬೇಕೆನ್ನುವ ನನ್ನ ಕನಸು ಶೀಘ್ರದಲ್ಲೇ ನನಸಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಸದಸ್ಯರು, ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಕಾರ್ಯಕರ್ತರು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ