ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತೆಯಿಂದ ಒಂದೂವರೆ ತಿಂಗಳ ಬಳಿಕ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಸರ್ಜರಿ ಇಲ್ಲದೆ ಫಿಜಿಯೋಥೆರಪಿ ಚಿಕಿತ್ಸೆ ಮೂಲಕ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಹೈಕೋರ್ಟ್ ಚಿಕಿತ್ಸೆಗಾಗಿ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಈ ನಡುವೆ ದರ್ಶನ್ ಹಾಗೂ ಎಲ್ಲಾ 17 ಕೊಲೆ ಆರೋಪಿಗಳಿಗೆ ಹೈಕೋರ್ಟ್ ನಿಂದ ರೆಗ್ಯೂಲರ್ ಬೇಲ್ ಮಂಜೂರಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳು ನಿನ್ನೆ ಜೈಲಿನಿಂದ ಬಿಡುಗಡೆಯಾಗಿದ್ದರು.
ಬೆನ್ನು ನೀವಿನಿಂದ ಗುಣಮುಖರಾಗಿರುವ ನಟ ದರ್ಶನ್ ಇಂದು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಫ್ಲ್ಯಾಟ್ ಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ