*ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಡಿದೆದ್ದಿದ್ದು, ಸಿ.ಟಿ.ರವಿ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಸುವರ್ಣಸೌಧದ ಬಳಿ ಜಮಾವಣೆಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು, ಎಂಎಲ್ ಸಿ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸುವರ್ಣಸೌಧಕ್ಕೆ ತಮ್ಮ ಕಾರಿನಲ್ಲಿ ಸಿ.ಟಿ.ರವಿ ಬರುತ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಸಿ.ಟಿ.ರವಿ ಕಾರನ್ನು ತಡೆದು, ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಸುವರ್ಣಸೌಧಕ್ಕೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹೆಬ್ಬಾಳಕರ್ ಬೆಂಬಲಿಗರನ್ನು ತಡೆದು, ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ